News Karnataka Kannada
Monday, May 13 2024
ಬೆಂಗಳೂರು ನಗರ

ಬೆಂಗಳೂರು: ದಲಿತ ಮಹಿಳೆ ಭೂಮಿ ಮರಳಿಸಲು ಪ್ರತಿಭಟನೆ

Strike
Photo Credit : By Author

ಬೆಂಗಳೂರು: ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಅವರು ದಲಿತ ವೃದ್ಧ ಮಹಿಳೆಯ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ಮರಳಿಸುವಂತೆ ಆಗ್ರಹಿಸಿ ಸಮತಾ ಸೈನಿಕ ದಳ ಭಾರೀ ಪ್ರತಿಭಟನೆ ನಡೆಸಿತು.

ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ ಸ್ವಾಮಿ ನೇತೃತ್ವದಲ್ಲಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಪ್ರತಿಭಟನೆ ನಡೆಸಿ

ಮಾತನಾಡಿ, ರವಿಶಂಕರ್ ಗುರೂಜಿ ಅವರಿಗೆ ದಲಿತರು, ಶೋಷಿತರ ಪರವಾಗಿ ಕಾಳಜಿ ಇಲ್ಲ. ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇದನ್ನು ವಿರೋಧಿಸಿ ನ್ಯಾಯ ಸಿಗುವ ತನಕ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ದಲಿತ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಹೇಳಿದರು.

ರವಿಶಂಕರ್ ಆಶ್ರಮದಿಂದ ಲಕ್ಷ್ಮೀಪುರದ ದಿವಂಗತ ಹನುಮಯ್ಯನ ಹೊಣೆಯ 70 ವರ್ಷ ವಯೋವೃದ್ಧ ದಲಿತ ಮಹಿಳೆ ರಂಗಮ್ಮನಿಗೆ ಸೇರಿರುವ ಸರ್ವೇ ನಂ 132/62 ರ 2 ಎಕರೆ ಜಮೀನನ್ನು ಬೇನಾಮಿ ಹೆಸರುಗಳ ನಕಲಿ ದಾಖಲೆ ಸೃಷ್ಠಿಸಿ ಆಶ್ರಮ ಕಬಳಿಸಿದ್ದು, ಈ ಭೂಮಿಯನ್ನು ಕೂಡಲೇ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು