ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು. ನೀವು ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ ಎಂದು ಹೇಳಿದರು.