News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯಸಭೆಯಲ್ಲಿಂದು ಪ್ರಮಾಣವಚನ ಸ್ವೀಕರಿಸಿದ ಡಾ. ವಿರೇಂದ್ರ ಹೆಗ್ಗಡೆ

Bengaluru: Dr. B.R. Ambedkar was sworn in in the Rajya Sabha today. Virendra Heggade
Photo Credit : Twitter

ಬೆಂಗಳೂರು: ನೂತನವಾಗಿ ಭಾರತದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭೆಯಲ್ಲಿಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಡಾ. ವಿರೇಂದ್ರ ಹೆಗ್ಗಡೆ ಹಾಗೂ ಇಳೆಯರಾಜಾ ಮತ್ತು ಪಿಟಿ ಉಷಾ ಅವರನ್ನು ರಾಜ್ಯಸಬೆಗೆ ನಾಮನಿರ್ದೇಶನಗೊಳಿಸಲಾಗಿತ್ತು. ಕರಾವಳಿ ಕರ್ನಾಟಕದ ಭಾಗದಿಂದ ಪ್ರಸ್ತುತ ರಾಜ್ಯಸಭೆಗೆ ಆಯ್ಕೆಯಾಗಿರುವ ಶ್ರೀಯುತರು ಇಂದು ರಾಜ್ಯಸಭೆಯ ಸ್ಪೀಕರ್‌ ಆಗಿರುವ ವೆಂಕಯ್ಯನಾಯ್ಡು ಅವರ ಸಮ್ಮುಖದಲ್ಲಿ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕನ್ನಡದಲ್ಲೇ ಪ್ರಮಾಣವಚನವನ್ನು ಹೇಳಿದ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಆ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತ ಅಪಾರ ಗೌರವಗಳಿಸಿರುವ ರಾಜರ್ಷಿಯೊಬ್ಬರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿರುವುದು ರಾಜ್ಯ ಹಾಗೂ ಜನತೆಗೆ ಹೆಮ್ಮೆ ಪಡುವ ಸಂಗತಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು