ಉದ್ಯಾನ್‌ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭಾರಿ ದುರಂತವೊಂದು ಸಂಭವಿಸಿದೆ. ನಗರದ ಮೆಜೆಸ್ಟಿಕ್​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿಅಗ್ನಿ ಅವಘಡ ಸಂಭವಿಸಿದೆ.

ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಿಡೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ.

Gayathri SG

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

20 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

38 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

51 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago