News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ಮಾಜಿ ಸಿಎಂ ಸಿದ್ದು ಬೆಂಗಳೂರು ನಗರದ ಯಾವುದೇ ಕ್ಷೇತ್ರಕ್ಕೆ ಬದಲಾಗುವ ಸಾಧ್ಯತೆ! 

Siddaramaiah to contest from another constituency, to shift to Kolar, Badami
Photo Credit : Twitter

ಬೆಂಗಳೂರು: ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಬಾದಾಮಿಯನ್ನು ಪ್ರತಿನಿಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಯಸ್ಸಿನ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರು ನಗರದ ಯಾವುದೇ ಕ್ಷೇತ್ರಕ್ಕೆ ತೆರಳುವ ಸಾಧ್ಯತೆಯಿದೆ.

ವಯೋಸಹಜವಾಗಿ ಬಾದಾಮಿಗೆ ಆಗಾಗ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಂಗಳೂರು ಸುತ್ತಮುತ್ತ ಯಾವುದೇ ಕ್ಷೇತ್ರಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ ಅವರು ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರನ್ನು ಸೋಲಿಸಿದರು. 2023 ಅವರ ಕೊನೆಯ ಚುನಾವಣೆಯಾಗಿದೆ ಎಂದು ಯತೀಂದ್ರ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು