News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಬೆಂಗಳೂರು: ಇಂದು ಮಧ್ಯರಾತ್ರಿ ಗೃಹಜ್ಯೋತಿ ಆರಂಭ

Bengaluru: Griha Jyothi to begin at midnight today
Photo Credit : News Kannada

ಬೆಂಗಳೂರು: ಕಾಂಗ್ರೆಸ್​​​ ಸರ್ಕಾರದ ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳು ಆರಂಭವಾಗಲಿದೆ. 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿ ಕೊಂಡಿದ್ದಾರೆ.

ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಜುಲೈ 01ರ ರಾತ್ರಿ 12 ಗಂಟೆ ಬಳಸುವ 200 ಯುನಿಟ್‌ ಒಳಗಿನ ಸರಾಸರಿ ಕರೆಂಟ್‌ಗೆ ಬಿಲ್‌ ಕಟ್ಟುವಂತಿಲ್ಲ. ಇನ್ನು12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್​ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್​ ಸಿಗಲಿದೆ.

12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್​ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ.

ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದು, ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು