ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.