ಬೆಂಗಳೂರು: ಶಾಲೆಗಳಲ್ಲಿನ್ನು ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

Umesha HS

Recent Posts

ಚುನಾವಣೆ ನಮ್ಮದು ಎನ್ನುವ ಸಂದೇಶ ಜನರಿಗೆ ನೀಡಿ: ಪಿ.ಎಸ್.ವಸ್ತ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ…

7 mins ago

ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆಗೆ ಕ್ಷಣಗಣನೆ

ಅಮೇಥಿ ಹಾಗು ರಾಯ್‌ಬರೇಲಿಯಿಂದ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಯ ಹೆಸರು ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಾಂಗ್ರೆಸ್‌…

22 mins ago

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ…

53 mins ago

ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ : ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್‌ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…

58 mins ago

ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ನಾಲ್ವರ ಬಂಧನ

ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು…

1 hour ago

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…

1 hour ago