News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರು: ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

Bengaluru: Journalists invite articles for Charity Award
Photo Credit : Freepik

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2022ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ತಲಾ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಸಂಸ್ಥೆಗಳು ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.

2022 ಜನವರಿ ಯಿಂದ ನವೆಂಬರ್-2022 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಅಭಿಮಾನಿ ಪ್ರಶಸ್ತಿ-2022 ಎಂದು ದಾಖಲಿಸಿ ಹಾಗೂ ಇದೇ ಅವಧಿಯ ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಮೈಸೂರು ದಿಗಂತ ಪ್ರಶಸ್ತಿ-2022 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

ಕನ್ನಡ ದೈನಿಕ. ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಬರೆದಿರುವ ವರದಿ ಮತ್ತು ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ ವರದಿಗಳನ್ನು ಇದೇ ಡಿಸೆಂಬರ್-31 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ “ಅಭಿಮಾನಿ ಪ್ರಶಸ್ತಿ-2022” ಹಾಗೂ “ಮೈಸೂರು ದಿಗಂತ ಪ್ರಶಸ್ತಿ-2022” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಫೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ. ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001, ಇವರಿಗೆ ಕಳುಹಿಸಲು ಅಕಾಡೆಮಿಯ ಅಧ್ಯಕ್ಷರಾದ ಕೆ. ಸದಾಶಿವ ಶೆಣೈ ಅವರು ಕೋರಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು