News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ಓಣಂ ಹಬ್ಬಕ್ಕೆ ಕೆಎಸ್‍ಆರ್ ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ

Bengaluru: KSRTC to arrange special buses for Onam festival
Photo Credit :

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸೆ.08ರಂದು ತಿರು ಓಣಂ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ. 06 ಮತ್ತು 07 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ ಸಾರಿಗೆಗಳ ಜೊತೆಗೆ ಹೆಚ್ಚುವರಿ ಬಸ್ಸುಗಳ ವಿಶೇಷ ವ್ಯವಸ್ಥೆ ಮಾಡಿದೆ.

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯಕ್ಕೆ ಅಂದರೆ ಕಣ್ಣೂರು, ಕೋಜಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ ವಾಹನಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು