ಬೆಂಗಳೂರು: ವಿಧಾನಸಭೆ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಯುಗಾದಿ ದಿನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿತ್ತು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯುಗಾದಿ ಆಚರಣೆಗಾಗಿ ಬೆಂಗಳೂರಿಗೆ ಬಂದಿದ್ದು ಈ ಕಾರಣದಿಂದ ಪಟ್ಟಿ ಬಿಡುಗಡೆ 2-3ದಿನದಲ್ಲಿ ಆಗಲಿದೆ ಎಂದು ತಿಳಿಸಿದ್ದಾರೆ.