ಬೆಂಗಳೂರು: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವರಾದ ಪ್ರಭು ಚೌಹ್ವಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.