ಬೆಂಗಳೂರು: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಎಂದ ಸಚಿವ ಡಾ.ಕೆ. ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಳಿತವಾಗುತ್ತಿದ್ದು, ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಸದ್ಯ ದಂಡ ವಿಧಿಸುವ ಪ್ರಸ್ತಾಪ ಇಲ್ಲ. ಪರಿಸ್ಥಿತಿ ನೋಡಿಕೊಂಡು ಮತ್ತೆ ಸಭೆ ನಡೆಸಿ ಚರ್ಚಿಸಲಾಗುವುದು. ಮಾಸ್ಕ್‌ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. ಎಲ್ಲರೂ ಮಾಸ್ಕ್‌ ಧರಿಸುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಸ್ತಾಪ ಸರ್ಕಾರ ಮುಂದೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ ಮೊದಲ ಹಾಗೂ ಎರಡನೇ ಡೋಸ್‌ ಲಸಿಕಾಕರಣದಲ್ಲಿ ಶೇ.100ರಷ್ಟು ಸಾಧನೆ ಮಾಡಲಾಗಿದೆ. ಆದರೆ, ಮೂರನೇ ಡೋಸ್‌ ಲಸಿಕೆಯನ್ನು ಶೇ.17ರಷ್ಟು ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ ಎಂದು ಹೇಳಿದರು.

Sneha Gowda

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

17 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

30 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

54 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago