News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರು: ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

Bengaluru: Minister Umesh Katti passes away due to cardiac arrest
Photo Credit : News Kannada

ಬೆಂಗಳೂರು: ಸಚಿವ ಉಮೇಶ್ ಕತ್ತಿ (61) ಅವರು  ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ ಇರಿಸಿ, ಚಿಕಿತ್ಸೆ ನೀಡುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು  ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು