ಬೆಂಗಳೂರು: ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿರುವ ಅದ್ವೈತ ಆಶ್ರಯ ಅಪಾರ್ಟ್ಮೆಂಟ್ ನಲ್ಲಿ ಹೆತ್ತ ತಾಯಿಯೊಬ್ಬಳು ತನ್ನ ಮಗುವನ್ನೇ ನಾಲ್ಕನೇ ಅಂತಸ್ತಿನಿಂದ ಕೆಳಗೆಸೆದು ಹತ್ಯೆ ಮಾಡಿದ ಘಟನೆ ನಡೆದಿದೆ.
ವೃತ್ತಿಯಲ್ಲಿ ದಂತ ವೈದ್ಯೆಯಾಗಿರುವ ಸುಷ್ಮಾ ತನ್ನ ಮಗಳು ದಿತಿಯನ್ನು ಕೆಳಗೆ ಎಸೆದು ಹತ್ಯೆಗೈದಿದ್ದಾಳೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಬಳಿಕ ಆಕೆಯೂ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ಗಮನಿಸಿ ಅಕ್ಕಪಕ್ಕದ ನಿವಾಸಿಗಳು ಓಡಿಬಂದ ವೇಳೆ ಕಾಪಾಡಿ ಕಾಪಾಡಿ. ಮಗು ಕೈ ತಪ್ಪಿ ಕೆಳಗೆ ಬಿದ್ದಿದೆ ಎಂದು ಕೂಗಿಕೊಂಡಿದ್ದಾಳೆ. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದೆ.ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಸ್ವತಃ ಸುಷ್ಮಾ ತನ್ನ ಮಗುವನ್ನು ಎತ್ತಿಕೊಂಡು ಬಂದು ಕೆಳಗೆ ಬಿಸಾಡಿರುವುದು ಕಂಡು ಬಂದಿದೆ.
ಇದೀಗ ಆಕೆಯ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.