ಬೆಂಗಳೂರು: ಚನ್ನಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಾವ ಶಿಷ್ಟಾಚಾರವೂ ಉಲ್ಲಂಘನೆಯಾಗಿಲ್ಲ

ಬೆಂಗಳೂರು: ಚನ್ನಪಟ್ಟಣ ತಾಲೂಕಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವ ಶಿಷ್ಟಾಚಾರವೂ ಉಲ್ಲಂಘನೆಯಾಗಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿ ಮರು ಅಭಿವೃದ್ಧಿಪಡಿಸಿರುವ ಚಂದ್ರಶೇಖರ ಆಜಾದ್ ಕ್ರೀಡಾಂಗಣ ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕುಮಾರಸ್ವಾಮಿಯವರಿಗೆ ಈ ಸಂಬಂಧ ಆಹ್ವಾನ ಕೊಡಲಾಗಿತ್ತು. ಸ್ವತಃ ಅವರೇ ತಾನು ನಿಗದಿತ ದಿವಸದಂದು ಬೇರೆ ಕೆಲಸ ಇರುವುದರಿಂದ ಕಾರ್ಯಕ್ರಮಕ್ಕೆ ಬರಲಾಗುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವುದಾಗಿಯೂ ಹೇಳಿದ್ದರು ಎಂದು ವಿವರಿಸಿದರು.

ಚನ್ನಪಟ್ಟಣದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತವೆ. ಅವೆಲ್ಲವೂ ಹೆಚ್ಚಾಗಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿಯೇ ಆಗುತ್ತವೆ. ಇದಕ್ಕಿಂತ ಮುಖ್ಯವಾಗಿ ನಮಗೆ ಬೇಕಿರುವುದು ಜಿಲ್ಲೆಯ ಒಟ್ಟಾರೆ ಅಭಿವೃದ್ಧ. ನಾವೇ ಮಾಡಲಿ, ಅವರೇ ಮಾಡಲಿ, ದುಡ್ಡು ಸರ್ಕಾರದ್ದೇ ಆಗಿರುತ್ತದೆ. ಹಾಗಿರುವಾಗ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರು ಈ ರೀತಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದರು.

ಸಿ ಪಿ ಯೋಗೇಶ್ವರ್ ಅವರು ನೇರವಾಗಿ ಮುಖ್ಯಮಂತ್ರಿಗಳ ಅನುದಾನದಿಂದ 50 ಕೋಟಿ ರೂಪಾಯಿಯನ್ನು ಅಭಿವೃದ್ಧಿಗಾಗಿ ತಂದಿದ್ದಾರೆ. ಕುಮಾರಸ್ವಾಮಿಯವರು ಇದರಲ್ಲಿ ಖುಷಿಯಿಂದ ಪಾಲ್ಗೊಳ್ಳಬೇಕಿತ್ತು ಅದನ್ನು ಬಿಟ್ಟು ವಿವಾದ ಉಂಟು ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago