News Karnataka Kannada
Wednesday, May 08 2024
ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್ ತೊರೆಯುವುದಿಲ್ಲ- ಕೆ.ಎಚ್.ಮುನಿಯಪ್ಪ

K H Muniyappa
Photo Credit : Wikimedia

ಬೆಂಗಳೂರು: ತಾವು ಬಿಜೆಪಿ ಸೇರುವ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರು ತಮ್ಮ ಎಲ್ಲ ಕುಂದುಕೊರತೆಗಳನ್ನು ಪರಿಹರಿಸಿರುವುದರಿಂದ ನಾನು ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ ಎಂದು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಸಮಸ್ಯೆಗಳಿದ್ದು, ಈ ಬಗ್ಗೆ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ ಎಂದರು. ಪಕ್ಷದ ವಿವಿಧ ಹಿರಿಯ ನಾಯಕರೊಂದಿಗೆ ಸೂಕ್ತ ಚರ್ಚೆ ನಡೆಸಿದ ನಂತರ, ನಾನು ಸಂತೃಪ್ತನಾಗಿದ್ದೇನೆ ಮತ್ತು ಪಕ್ಷವನ್ನು ತೊರೆಯುವುದಿಲ್ಲ.

ಮುನಿಯಪ್ಪ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿ ಮಾಡಿದ್ದರು. ಮುಂದಿನ ದಿನಗಳಲ್ಲಿ ಎಲ್ಲಾ ಕುಂದುಕೊರತೆಗಳನ್ನು ಪರಿಹರಿಸುವುದಾಗಿ ಅವರು ನನಗೆ ಭರವಸೆ ನೀಡಿದ್ದಾರೆ.

ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿ ಮಾಜಿ ಶಾಸಕ ಎಂ.ಸಿ.ಸುಧಾಕರ್ ಅವರನ್ನು ಸಂಪರ್ಕಿಸದೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಬಗ್ಗೆ ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು