News Karnataka Kannada
Sunday, April 28 2024
ಸಾಂಡಲ್ ವುಡ್

ಬೆಂಗಳೂರು: ಕನ್ನಡದ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Bengaluru: Opposition leader Siddaramaiah watched kannada movie 'Dollu'
Photo Credit :

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರಿನಲ್ಲಿ ಕನ್ನಡದ ‘ಡೊಳ್ಳು’ ಸಿನಿಮಾವನ್ನು ವೀಕ್ಷಿಸಿದರು. ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಸಿನಿಮಾ ನೋಡಿದರು.

ಹಲವು ಕಾರಣಗಳಿಂದಾಗಿ ‘ಡೊಳ್ಳು’ ಚಿತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾಗೆ ಸಾಗರ್​ ಪುರಾಣಿಕ್​ ನಿರ್ದೇಶನ ಮಾಡಿದ್ದು, ಖ್ಯಾತ ನಿರ್ದೇಶಕ ಪವನ್​ ಒಡೆಯರ್​ ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ಈ ಸಿನಿಮಾ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿರುವುದು ವಿಶೇಷ. ಅಲ್ಲದೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಮನ್ನಣೆ ಪಡೆದುಕೊಂಡಿದೆ. ಹೆಸರೇ ಹೇಳುವಂತೆ ಕರುನಾಡಿನ ಜನಪದ ಕಲೆಗಳಲ್ಲಿ ಒಂದಾದ ಡೊಳ್ಳು ಕುಣಿತದ ಬಗ್ಗೆ ಈ ಸಿನಿಮಾ ಕಥೆ ಇದೆ.

ಸಿನಿಮಾ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಒರಾಯನ್ ಮಾಲ್​ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದೆ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು