ಬೆಂಗಳೂರು ನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದು!

ಬೆಂಗಳೂರು ನಗರ: ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.

ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು.

ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು.

ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.

ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ.

Sneha Gowda

Recent Posts

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

3 seconds ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

15 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

26 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

41 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago