ಬೆಂಗಳೂರು ನಗರ

ಬೆಂಗಳೂರು: ಎಸ್.ಸಿ/ಎಸ್.ಟಿ ಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ- ಸಿಎಂ ಬೊಮ್ಮಾಯಿ

ಬೆಂಗಳೂರು, ಅ.11: ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.

ಪರವಾನಗಿ ಇಲ್ಲದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕ್ಕೆ ಸೂಚನೆ
ಓಲಾ, ಊಬರ್ ಪರವಾನಗಿ ರದ್ದಾಗಿರುವ ಬಗ್ಗೆ ಸಾರಿಗೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವುದೇ ಪರವಾನಗಿ ಇಲ್ಲದೆ ಯಾವ ಸಂಸ್ಥೆಯನ್ನೂ ನಡೆಸಬಾರದು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದರು.

ಗಂಧದಗುಡಿ ಟೀಸರ್ ಬಿಡುಗಡೆಗೆ ಆಹ್ವಾನ
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮ ಉದ್ಘಾಟಿಸಲು ಆಮಂತ್ರಣ ನೀಡಿದರು. ರಾಘವೇಂದ್ರ ರಾಜ್ ಕುಮಾರ್ ಅವರೂ ಇದ್ದರು ಎಂದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago