News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕ

Bengaluru: The budget session will be held from February 10 to 24.
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಪ್ರಜಾಪ್ರತಿನಿಧಿಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಓರ್ವ ಮಹಿಳೆ ಸೇರಿದಂತೆ ಪ್ರತಿ 1 ಸಾವಿರ ಜನರಿಗೆ ಅಥವಾ 1 ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿ ನೇಮಕ ಮಾಡಲಾಗುತ್ತಿದೆ. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ ಮೊಬೈಲ್​ ಆ್ಯಪ್​ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದರಂತೆಯೇ ಇಂದು ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. 1000 ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ 2 ಪುಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗೆ, ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ನಗರ ಪುದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ವಾರ್ಡ್​ನಲ್ಲಿ 1000 ಜನಸಂಖ್ಯೆಗೆ ಇಬ್ಬರು ಪುಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗ ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರಜಾ ಪ್ರತಿನಿಧಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಿಜಿಟೈಸ್​​ ಮಾಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು