ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರು ರಾಜಾಜಿ ನಗರ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ, ಪುಟ್ಟಣ್ಣ ಅವರನ್ನು ಬರಮಾಡಿಕೊಂಡರು.