News Karnataka Kannada
Monday, May 06 2024
ಸಾಂಡಲ್ ವುಡ್

ಬೆಂಗಳೂರು: ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದ ಡಾ.ರಾಜ್‌ಕುಮಾರ್ ಕುಟುಂಬದ ಸದಸ್ಯರು

Bengaluru: Rajkumar's family members meet CM Bommai
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ. ರಾಜ್‌ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್  ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವರನಟ ಡಾ. ರಾಜಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.

ಯೋಜನೆಗೆ ಆಗಬಹುದಾದ ಖರ್ಚುವೆಚ್ಚಗಳ ಬಗ್ಗೆ ಲೆಕ್ಕಾಚಾರಗಳನ್ನು ಲೋಕೋಪಯೋಗಿ ಇಲಾಖೆಯಿಂದ ತರಿಸಲು ಸಿಎಂ ಸೂಚನೆ ನೀಡಿದರು. ಇಲಾಖೆಯಿಂದ ಯೋಜನೆಯ ರೂಪರೇಷೆ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸೋಣ ಎಂದು ಇದೇ ಸಂದರ್ಭದಲ್ಲಿ ರಾಜ್ ಕುಮಾರ್ ಕುಟುಂಬ ಸದಸ್ಯರಿಗೆ ಸಿಎಂ ಹೇಳಿದ್ದಾರೆ.

Photo credit: G Mohan

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು