ಬೆಂಗಳೂರು: ರಾಜ್ಯಪಾಲರಿಗೆ ಬಿಜೆಪಿ ಸದಸ್ಯರ ಅಮಾನತು ಕಾರಣ ವಿವರಿಸಿದ ಸ್ಪೀಕರ್‌

ಬೆಂಗಳೂರು: ಸದಸ್ಯರ ಅಶಿಸ್ತಿನ ವರ್ತನೆಗೆ ಸಂಬಂಧಿಸಿ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿದ ಸ್ಪೀಕರ್ ಯುಟಿ ಖಾದರ್ ಮತ್ತು ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಲು ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸದನದಲ್ಲಿ ಬಿಲ್‌ಗಳು ಮತ್ತು ಅಜೆಂಡಾ ದಾಖಲೆಗಳ ಪ್ರತಿಗಳನ್ನು ಹರಿದು ಅಧ್ಯಕ್ಷರ ಕಡೆಗೆ ಎಸೆದ ನಂತರ ಅವರ “ಅಸಭ್ಯ ಮತ್ತು ಅಗೌರವದ ನಡವಳಿಕೆ”ಗಾಗಿ ಅವರನ್ನು ಅಮಾನತುಗೊಳಿಸಲಾಯಿತು. ನಾಲ್ಕು ಮಾಜಿ ಸಚಿವರಾದ ಆರ್ ಅಶೋಕ, ಡಾ ಸಿ ಎನ್ ಅಶ್ವಥ್ ನಾರಾಯಣ, ವಿ ಸುನೀಲ್ ಕುಮಾರ್ ಮತ್ತು ಆರಗ ಜ್ಞಾನೇಂದ್ರ ಸೇರಿದಂತೆ 10 ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಇನ್ನು ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಗುರುವಾರ ಕಲಾಪವನ್ನು ಬಹಿಷ್ಕರಿಸಿವೆ.

ಇನ್ನು ಸದಸ್ಯರ ಅಮಾನತು ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಸ್ಪೀಕರ್ ನಿರ್ಧಾರವನ್ನು ಅಸಂವಿಧಾನಿಕ ಎಂದು ಕರೆದಿದ್ದು, ಈ ಸಂಬಂಧ ಬಿಜೆಪಿ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

11 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

25 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

49 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago