ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.
ಈ ಹಿನ್ನಲೆಯಲ್ಲಿ ವಿವಿಧ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಆದರೆ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಸಹಜವಾಗಿದೆ. ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಕಡಿವಾಣ ಹಾಕಲು
ಸಿಬ್ಬಂದಿ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಪೂರ್ವಭಾವಿ ರಜೆ ಪಡೆಯದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿದೆ ಎಚ್ಚರಿಸಿದೆ.
ವೈದ್ಯಾಧಿಕಾರಿಗಳ ಸಂಘವೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಸರ್ಕಾರಿ ಶಾಲಾ ಶಿಕ್ಷಕರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.