ಬೆಂಗಳೂರು: ಯಥಾಸ್ಥಿತಿ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

ಬೆಂಗಳೂರು, ಆ.30: ಗಣೇಶ ಚತುರ್ಥಿ ಪೂಜೆಯನ್ನು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಸುವ ಬದಲು ಬೇರೆಡೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.

ಈದ್ಗಾ ಮೈದಾನ ವಿಚಾರದ ಕುರಿತು ಈ ಮೊದಲು ಹೈಕೋರ್ಟ್ ನೀಡಿರುವ ಆದೇಶದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಹೈಕೋರ್ಟ್ ನಲ್ಲಿ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಅನುಮತಿ ನೀಡುವ ಬಗ್ಗೆ ಆ.31ರೊಳಗೆ ರಾಜ್ಯ ಸರ್ಕಾರದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿತ್ತು. ಏತನ್ಮಧ್ಯೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.

 

Gayathri SG

Recent Posts

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

12 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

32 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

55 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago