News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ನ.22, ಸಿಎಂ ನಿವಾಸದ ಎದುರು ಕಬ್ಬು ಬೆಳೆಗಾರರ ಧರಣಿ

Farmer Strike
Photo Credit : By Author

ಬೆಂಗಳೂರು: ಕಬ್ಬು ಎಫ್‌ಆರ್‌ಪಿ ದರ ಏರಿಕೆ, ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಕಬ್ಬು ಬೆಳೆಗಾರ ರೈತರಿಂದ ನ.22ರಿಂದ ಬೆಂಗಳೂರಿನ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ.

ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು, ನ.೨೦ರ ಒಳಗಾಗಿ ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿ ಸಕ್ಕರೆ ಸಚಿವರು ಈತನಕ ಯಾವುದೇ ನಿರ್ಧಾರ ಪ್ರಕಟಿಸಿದೆ ಇರುವುದು ಖಂಡನೀಯ. ಮುಖ್ಯಮಂತ್ರಿಗಳನ್ನು ಎರಡು ಬಾರಿ ಭೇಟಿ ಮಾಡಿದಾಗಲೂ ರೈತರಿಗೆ ನ್ಯಾಯ ನೀಡುವುದಾಗಿ ಭರವಸೆ ನೀಡಿ, ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಹೀಗಾಗಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ಅತಿವೃಷ್ಟಿ ಮಳೆಹಾನಿ ಕಾರಣ ಭತ್ತದ ಬೆಳೆ ಸ್ವಲ್ಪಮಟ್ಟಿಗೆ ಇಳುವರಿ ಕಡಿಮೆಯಾಗುತ್ತಿದೆ. ಬೆಲೆ ಕಡಿಮೆಯಾಗುವ ಕಾರಣ ಕೂಡಲೇ ಭತ್ತ ಕಟಾವು ಆರಂಭಕೆ ಮುನ್ನ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು. ವಿದ್ಯುತ್ ಖಾಸಗಿಕರಣ ಕೈಬಿಡಬೇಕು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವುದು ಬೇಡ. ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪದ್ಧತಿಯನ್ನು ಪರಿಗಣಿಸಿ ಸಾಲ ನೀಡುವ ಪದ್ಧತಿ ಕೈಬಿಡಬೇಕು. ಆರ್‌ಬಿಐ ಮುಖ್ಯಸ್ಥರು ಸಭೆ ಕರೆಯುವ ಭರವಸೆ ನೀಡಿದಂತೆ ತಕ್ಷಣವೇ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು.

ಬಗರ್ ಹುಕುಂ ಸಾಗುವಳಿ ಹತ್ತಾರು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಅರಣ್ಯ ಭೂಮಿಯನ್ನು ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪಟ್ಟಾವನ್ನು ನೀಡಬೇಕು. ಕಾಡಂಚಿನಲ್ಲಿ ಕಾಡು ಪ್ರಾಣಿಗಳಿಂದ ಆಗುವ ಬೆಳೆ ಹಾನಿ ಪರಿಹಾರ ವೈಜ್ಞಾನಿಕವಾಗಿ ನಷ್ಟ ಭರಿಸಬೇಕು. ಈ ಎಲ್ಲಾ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವವರೆಗೆ ನಿರಂತರ ಆಹೋರಾತ್ರಿ ಹೋರಾಟ ನಡೆಸಲು ಕಬ್ಬು ಬೆಳೆಗಾರರು ನಿರ್ಧರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು