ಬೆಂಗಳೂರು: ರಾಜ್ಯದಲ್ಲಿ 22 ದಿನಗಳ ಕಾಲ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ, ಮಾಜಿ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಬಸ್ ಯಾತ್ರೆಗೆ ಚಾಲನೆ ನೀಡಲು ಸಿದ್ಧರಾಗಿದ್ದಾರೆ.
ಇದಕ್ಕಾಗಿ ಐಷಾರಾಮಿ ಬಸ್ ಸಿದ್ಧಪಡಿಸಲಾಗುತ್ತಿದೆ.
1999ರಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ನೆರವಾದ ಎಸ್ಎಂ ಕೃಷ್ಣ ಅವರ ಪಾಂಚಜನ್ಯ ಯಾತ್ರೆಯಂತೆಯೇ ಈ ಯಾತ್ರೆಯೂ ನಡೆಯಲಿದೆ ಎಂಬುದು ಸಿದ್ದರಾಮಯ್ಯ ಅವರ ನಿಕಟವರ್ತಿಗಳ ಅಭಿಪ್ರಾಯ.
“ಸಿದ್ದರಾಮಯ್ಯ ಅವರು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ. ಶಾಸಕರ ಒತ್ತಡದಿಂದಾಗಿ ಈ ಯಾತ್ರೆಯನ್ನು ಯೋಜಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಈ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.ರಾಹುಲ್ ಗಾಂಧಿ ಅನುಮತಿ ನೀಡಿದ ನಂತರ ಯಾತ್ರೆ ಆರಂಭಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ವಿವರಿಸಿದರು.