News Karnataka Kannada
Friday, May 10 2024
ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಅಪಾರ್ಟ್ ಮೆಂಟ್ ನಿವಾಸಿಗಳ ಘಟಕ ಆರಂಭ

Vijayapura: Three sitting MLAs confirmed of hand tickets, rest uncertain
Photo Credit : News Kannada

ಬೆಂಗಳೂರು: ಬೆಂಗಳೂರಿನ ಜನರು ಅದರಲ್ಲೂ ಅಪಾರ್ಟ್ ಮೆಂಟ್ ನಿವಾಸಿಗಳ ಮೂಲಸೌಕರ್ಯ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಅಪಾರ್ಟ್ ಮೆಂಟ್ ನಿವಾಸಿಗಳ ನೂತನ ಘಟಕವನ್ನು ಆರಂಭಿಸಿದ್ದು, ಪ್ರೋ.ರಾಜೀವ್ ಗೌಡ ಅವರನ್ನು ಈ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾ ಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಶೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ ಅವರು ಈ ವಿಚಾರ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಶೇಕ್ ದತ್ ಅವರು, ‘ಕಳೆದ ಮೂರ್ನಾಲ್ಕು ವರ್ಷಗಳಿಂದ ಅದರಲ್ಲೂ ಕೋವಿಡ್ ಹಾಗೂ ನಂತರದ ಸಮಯಗಳಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳು ಅತ್ಯಂತ ಸಂಕಷ್ಟಗಳನ್ನು ಅನುಭವಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲಾಗುತ್ತಿರಲಿಲ್ಲ. ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಐಟಿ ವಲಯ, ಸಣ್ಣ ಮತ್ತು ಮಧ್ಯಮ ವ್ಯಾಪಾರ ಕುಟುಂಬಗಳು, ಇತರ ವರ್ಗದವರು ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುತ್ತಿದ್ದಾರೆ. ಬೆಂಗಳೂರಿನ ಭವಿಷ್ಯ ಅಪಾರ್ಟ್ ಮೆಂಟ್ ಗಳ ಮೇಲೆ ನಿಂತಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಪಾರ್ಟ್ ಮೆಂಟ್ ನಿವಾಸಿಗಳ ಸಮಸ್ಯೆಯನ್ನು ತಿಳಿಯಲು ಹಾಗೂ ಅವುಗಳಿಗೆ ಸ್ಪಂದಿಸಲು ಪಕ್ಷ ಈ ಘಟಕವನ್ನು ಆರಂಭಿಸುತ್ತಿದೆ. ಈ ಘಟಕದ ಅಧ್ಯಕ್ಷರನ್ನಾಗಿ ರಾಜ್ಯಸಭೆ ಮಾಜಿ ಸದಸ್ಯರಾದ ರಾಜೀವ್ ಗೌಡ ಅವರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

ನಂತರ ಮಾತನಾಡಿದ ರಾಜೀವ್ ಗೌಡ ಅವರು, ‘ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಸಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಅದರ ಜತೆಗೆ ಅಪಾರ್ಟ್ ಮೆಂಟ್ ನಿವಾಸಿಗಳು ಹೆಚ್ಚು ಸಮಸ್ಯೆ ಅನುಭವಿಸುತ್ತಿವೆ. ಈ ಸಮಸ್ಯೆಗಳನ್ನು ಅರಿತು ಅವುಗಳಿಗೆ ಪರಿಹಾರ ರೂಪಿಸಲು ಕಾಂಗ್ರೆಸ್ ಪಕ್ಷ ಅಪಾರ್ಟ್ ಮೆಂಟ್ ಘಟಕ ಆರಂಭಿಸಿದೆ. ಈ ಘಟಕ ಶಾಶ್ವತ ಘಟಕವಾಗಿ ಉಳಿಯಲಿದೆ. ಈ ಘಟಕದಲ್ಲಿ ಪ್ರವೀಣ್ ಪೀಟರ್ ಅವರು ಸಂಚಾಲಕರಾಗಿ, ಮಾಜಿ ಮೇಯರ್ ಗಂಗಾಬಿಕೆ ಅವರು ಸಹ ಸಂಚಾಲಕರಾಗಿದ್ದಾರೆ.

ಮೊದಲು ದೊಡ್ಡ ಕಾರ್ಯಕ್ರಮ ಹಮ್ಮಿಕೊಂಡು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಅಪಾರ್ಟ್ ಮೆಂಟ್ ಮಾಲೀಕರ ಸಂಘ, ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದವರನ್ನು ಒಂದೆಡೆಗೆ ಸೇರಿಸಿ ಅವರನ್ನು ತಲುಪುವ ಪ್ರಯತ್ನ ಮಾಡುತ್ತೇವೆ. ನಂತರ ಪ್ರತಿ ಕ್ಷೇತ್ರಗಳಲ್ಲಿ ಸಭೆ ಮಾಡುತ್ತೇವೆ. ಈ ಸಭೆಯಲ್ಲಿ ಅವರ ಸಭೆಗಳು, ಅವರಿಗೆ ಅಗತ್ಯವಿರುವುದೇನು ಎಂದು ಮಾಹಿತಿ ಪಡೆಯುತ್ತೇವೆ. ನಾನು ಬಿಬಿಎಂಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದು, ರಾಮಲಿಂಗಾ ರೆಡ್ಡಿ ಅವರು ಬೆಟರ್ ಬೆಂಗಳೂರು ಸಮಿತಿ ಅಧ್ಯಕ್ಷರಾಗಿದ್ದಾರೆ. ನಾವು ಮುಂಬರುವ ಚುನಾವಣೆಯಲ್ಲಿ ಬೆಂಗಳೂರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದ್ದು, ಇದರಲ್ಲೂ ನಾವು ಅಪಾರ್ಟ್ ಮೆಂಟ್ ಗಳಿಗೆ ಹೆಚ್ಚಿನ ಗಮನ ಹರಿಸುತ್ತೇವೆ’ ಎಂದು ತಿಳಿಸಿದರು.

‘ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ತಬ್ಬಲಿಯ ಭಾವನೆ ಬರಬಾರದು. ರಾಜಕೀಯ ನಾಯಕರು ತಮ್ಮತ್ತ ಗಮನಹರಿಸುತ್ತಿಲ್ಲ ಎಂದುಕೊಳ್ಳಬಾರದು. ಹಾಲಿ ಸರ್ಕಾರ ಅವರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ನಾವು ಮೂಲ ಸೌಕರ್ಯ, ನೀರು, ತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಭದ್ರತೆ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಬೆಂಗಳೂರು ವಿಶ್ವದಲ್ಲೇ ಅತ್ಯಂತ ವಾಸ ಯೋಗ್ಯ ನಗರವನ್ನಾಗಿ ಮಾಡಬೇಕು ಎಂಬುದು ನಮ್ಮ ಗುರಿ. ಈ ಸಮಿತಿಯಲ್ಲಿ ನಾಗರೀಕ ಸಮಾಜದಿಂದ ಪ್ರತಿನಿಧಿಗಳು ಸಲಹೆಗಾರರಾಗಿ ಕೆಲಸ ಮಾಡಲಿದ್ದಾರೆ. ಎನ್.ಎಸ್ ಮುಕುಂದ, ತಾರಾ ಕೃಷ್ಣಸ್ವಾಮಿ, ಕಿರಣ್ ಹೆಬ್ಬಾರ್, ಗೀತಾ ಶಿವರಾಂ, ಡಿ.ವಿ. ಲಕ್ಷ್ಮಿ, ಕೆ.ವಿ ಗೌತಮ್, ದಿಪಿಕಾ ರೆಡ್ಡಿ, ಕರ್ನಲ್ ದಿನೇಶ್ ಕುಮಾರ್, ಕರ್ನಲ್ ರಾಜ್, ಜಗದೀಶ್ ರೆಡ್ಡಿ, ಮಕ್ಕಳ ಹೋರಾಟಗಾರ್ತಿ ಸರಿತಾ ವಾಸು, ರಾಜೇಂದ್ರ ಬಾಬು ಅವರು ಇದ್ದಾರೆ’ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು