ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾ.22ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಡ್ಯದ ನಾಗಮಂಗಲ ಆದಿಚುಂಚನಗಿರಿ ಮಠಕ್ಕೆ ತೆರಳಿ ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ ನಾರಾಯಣ ಗೌಡ ಸೇರ್ಪಡೆ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ ಎಂದು ಉತ್ತರಿಸಿದರು.