News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರು: ಗ್ರಂಥಾಲಯ ವಲಯದಲ್ಲೀಗ ಡಿಜಿಟಲೀಕರಣದ ಕ್ರಾಂತಿ

BENGALURU: The digitalisation revolution in the library sector
Photo Credit : By Author

ಬೆಂಗಳೂರು: ರಾಜ್ಯದ ಗ್ರಂಥಾಲಯ ವಲಯದಲ್ಲಿ ಡಿಜಿಟಲ್ ಕ್ರಾಂತಿಯಾಗುತ್ತಿದ್ದು, ಡಿಜಿಟಲೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ ಎಸ್. ಹೊಸಮನಿ ತಿಳಿಸಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಕೇಂದ್ರ ವಲಯ ದಿಂದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣದಿಂದ ಹೆಚ್ಚಿನ ಓದುಗರನ್ನು ತಲುಪಲು ಮತ್ತು ಗ್ರಂಥಾಲಯ ನಿರ್ವಹಣೆ ಸುಲಭವಾಗಿದೆ. ಈ ಯಶಸ್ಸಿನ ನಂತರ ಎಲ್ಲಾ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲು ಒತ್ತು ನೀಡಲಾಗಿದೆ ಎಂದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಟಿ.ಮಲ್ಲೇಶಪ್ಪ, ಡಾ.ಪಿ.ವೈ, ರಾಜೇಂದ್ರಕುಮಾರ್, ಗ್ರಂಥಾಲಯ ಪ್ರಾಧಿಕಾರದ ಸದಸ್ಯರು, ಸಾಹಿತಿ ಶೂದ್ರ ಶ್ರೀನಿವಾಸ, ಶಿಕ್ಷಣಾಧಿಕಾರಿ ಮುತ್ತಯ್ಯ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯವಸ್ಥಾಪಕ ನರೇಂದ್ರ ಬಾಬು, ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ದಿವಾಕರ, ಮುಖ್ಯ ಗ್ರಂಥಾಲಯ ಅಧಿಕಾರಿ ಎಂ. ಶಂಕರಪ್ಪ, ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಕೇಂದ್ರ ವಲಯದ ಶಾಖಾ ಗ್ರಂಥಾಲಯ ವಿಭಾಗಗಳ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ 70 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಗಾಯಕಿ ಚಾಂದಿನಿ ಗರ್ತಿಕೆರೆ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು