News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧ

ವರಿಷ್ಠರು ಜೊತೆಗೆ ಮಾತನಾಡಿ ಈಶ್ವರಪ್ಪ ಅವರನ್ನು ಮನವೊಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Credit :

ಬೆಂಗಳೂರು: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರ ಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು.

ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು