News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ದ ಸೊಕ್ (ಮಾರ್ಕೆಟ್)

Bengaluru: The Soc (Market) at the Premises of Chitrakala Parishad
Photo Credit : News Kannada

ಬೆಂಗಳೂರು, ಸೆ.15: ಚಿತ್ತಾರ ಹಾಗೂ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ಸಹಯೋಗದೊಂದಿಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ದ ಸೊಕ್ (ಮಾರ್ಕೆಟ್) ಅನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 16ರಿಂದ ಸೆಪ್ಟೆಂಬರ್ 25ರವರೆಗೆ ನಡೆಯಲಿರುವ ಈ ಕರಕುಶಲವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ನಟಿ ಶುಭಾ ಪೂಂಜಾ ಉದ್ಘಾಟಿಸಲಿದ್ದಾರೆ. ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ.ಬಿ.ಎಲ್. ಶಂಕರ್ ಹಾಗೂ ಉಪಾಧ್ಯಕ್ಷರಾದ ಕೆ.ಎಸ್. ಅಪ್ಪಾಜ್ಜಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಸೆಪ್ಟೆಂಬರ್ 16ರಿಂದ ಸೆಪ್ಟೆಂಬರ್ 25ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 7ರವರೆಗೆ ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ. ಕಲಾವಿದರ ಕೈಯಲ್ಲಿ ಅರಳಿದ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಉಡುಪು ಹಾಗೂ ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು