ಬೆಂಗಳೂರು: ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಹಿನ್ನೆಲೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ೬೯ ರಲ್ಲಿ ಈ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ ಕೆ.ಎಸ್.ಆರ್.ಟಿ. ಬಸ್ ಹಿಂದೆ ಪ್ರಯಾಣಿಸುತ್ತಿದ್ದರು. ಹಾಲಿನ ಟ್ಯಾಂಕರ್ ಇದ್ದಕ್ಕಿದ್ದಂತೆ ಬರುತ್ತಿರುವುದನ್ನು ಗಮನಿಸಿದ ಟೆಂಪೋ ಟ್ರಾವೆಲರ್ ಚಾಲಕ ವಾಹನವನ್ನು ಎಡಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಟ್ಯಾಂಕರ್ ಹಿಂದಿನಿಂದ ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದಿದೆ.