ಬೆಂಗಳೂರು:  ದಸರಾ ಪ್ರಯುಕ್ತ ಸಾರಿಗೆ ವಿಶೇಷ ಪ್ಯಾಕೇಜ್

ಬೆಂಗಳೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್ ಸಾರಿಗೆ ಸೇವೆಗಳ ಜೊತೆಗೆ ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಿದೆ.

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸಕ್ಕಾಗಿ ವಿವಿಧ ಪ್ಯಾಕೇಜ್ ಮಾಡಲಾಗಿದೆ. ಅದರ ವಿವರಗಳು ಹೀಗಿವೆ.

ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ.250/-).

ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣ ದರ ವಯಸ್ಕರಿಗೆ: ರೂ.450/- ಮತ್ತು ಮಕ್ಕಳಿಗೆ: ರೂ.250/-).

ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ: ರೂ.300/- ಮತ್ತು ಮಕ್ಕಳಿಗೆ: ರೂ.175/-).

ಮೈಸೂರು ನಗರ ದೀಪಾಲಂಕಾರ ದರ್ಶನ: ನಗರ ಬಸ್ ನಿಲ್ದಾಣದಿಂದ ಅರಮನೆ ರಸ್ತೆ, ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ರಸ್ತೆ, ಎಲ್.ಐ.ಸಿ ವೃತ್ತ, ಬಂಬೂ ಬಜಾರ್ ರಸ್ತೆ, ರೈಲ್ವೆ ನಿಲ್ದಾಣ ವೃತ್ತ, ಜೆ.ಎಲ್.ಬಿ ರಸ್ತೆ (ಮೂಡ ಕಛೇರಿ ರಸ್ತೆ) ಮತ್ತು ನಗರ ಬಸ್ ನಿಲ್ದಾಣ (ಪ್ರಯಾಣ ದರ ವಯಸ್ಕರಿಗೆ: ರೂ.200/- ಮತ್ತು ಮಕ್ಕಳಿಗೆ: ರೂ.150/-) ನಗರ ವೋಲ್ವೋ ವಾಹನಗಳಿಂದ-ಸಂಜೆ 6 ಕ್ಕೆ ನಿರ್ಗಮನ.

ಮೈಸೂರು ದರ್ಶಿನಿ: ನಗರ ವೋಲ್ವೋ ವಾಹನಗಳಿಂದ -ನಂಜನಗೂಡು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, ಶ್ರೀರಂಗಪಟ್ಟಣ, ಕೆ.ಆರ್.ಎಸ್(ಪ್ರಯಾಣ ದರ ವಯಸ್ಕರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ.200/-) ನಿಗದಿಪಡಿಸಲಾಗಿದೆ. ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ ನಡೆಯಲಿದೆ.

ಮಡಿಕೇರಿ ಪ್ಯಾಕೇಜ್: ನಿಸರ್ಗಧಾಮ-ಗೋಲ್ಡನ್ ಟೆಂಪಲ್-ಹಾರಂಗಿ ಜಲಾಶಯ-ರಾಜಾ ಸೀಟ್-ಅಬ್ಬೀಫಾಲ್ಸ್ (ಪ್ರಯಾಣ ದರ ವಯಸ್ಕರಿಗೆ: (ರೂ.1200/- ಮತ್ತು ಮಕ್ಕಳಿಗೆ: ರೂ.1000/-).

ಊಟಿ ಪ್ಯಾಕೇಜ್: ಊಟಿ-ಬಟಾನಿಕಲ್ ಗಾರ್ಡನ್-ಇಟಾಲಿಯನ್ & ರೋಸ್ ಗಾರ್ಡನ್-ಬೋಟ್ ಹೌಸ್ (ಪ್ರಯಾಣ ದರ ವಯಸ್ಕರಿಗೆ: ರೂ.1600/- ಮತ್ತು ಮಕ್ಕಳಿಗೆ: ರೂ.1200/-).

ಈ ಪ್ಯಾಕೇಜ್ ಸಾರಿಗೆಗಳು (ಮೈಸೂರು ನಗರ ದೀಪಾಲಂಕಾರ ದರ್ಶನ ಹೊರತುಪಡಿಸಿ) ಬೆಳಿಗ್ಗೆ ಮೈಸೂರಿನಿಂದ ಹೊರಟು ಈ ಎಲ್ಲಾ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ. ಈ ಪ್ಯಾಕೇಜ್‍ಗಳನ್ನು ಅಕ್ಟೋಬರ್ 01,ರಿಂದ ಅಕ್ಟೋಬರ್ 10 ಅವಧಿಯಲ್ಲಿ ಕಾರ್ಯಾಚರಿಸಲಾಗುವುದು. ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ, ಮೊಬೈಲ್ ಬುಕಿಂಗ್ ಹಾಗೂ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

Sneha Gowda

Recent Posts

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

10 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

24 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

41 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago