News Karnataka Kannada
Tuesday, May 07 2024
ಬೆಂಗಳೂರು ನಗರ

ಬೆಂಗಳೂರು: ಅಪರಿಚಿತ ವ್ಯಕ್ತಿ ಮೇಲೆ ಹಲ್ಲೆ, ಓರ್ವ ಬಂಧನ

ಕಳ್ಳತನ
Photo Credit : Pexels

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯ ಬಾರ್ ಬಳಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದು. ಇನ್ನುಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಬಾರ್ ಬಳಿ ನಡೆದ ಹಲ್ಲೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಆರೋಪಿ ಮಂಜೇಶ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಆದರೆ ಯುವತಿ ನಿತಿನ್ ಎಂಬ ಯುವಕನನ್ನು. ಆದರೆ ತಾನು ಇಷ್ಟಪಟ್ಟ ಹುಡುಗಿಯನ್ನು ಹೇಗಾದರೂ ಮಾಡಿ ಒಲಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಆಕೆ ಪ್ರೀತಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲು ಮಂಜೇಶ್ ಪ್ಲಾನ್ ಮಾಡಿದ್ದಾನೆ.

ಮಂಜೇಶ್ ಮಾತನಾಡಬೇಕು ಎಂದು ನಿತಿನ್ ನನ್ನು ಕರೆದಿದ್ದು, ಸ್ಥಳಕ್ಕೆ ಬಂದ ವ್ಯಕ್ತಿ ನಿತಿನ್ ಎಂದು ಭಾವಿಸಿ ಏಕಾಏಕಿ ಮಾರಕಾಸ್ತ್ರಗಳಿಂದ ಮಂಜೇಶ್ ಹಾಗೂ ಗ್ಯಾಂಗ್ ಅಪರಿಚಿತನ ಮೇಲೆ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಈ ಸಂಬಂಧ ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು