ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ. ವಿವಿಧ ರಾಜ್ಯಗಳಿಂದ ಬಂದಿರುವ ವಿಸ್ತಾರಕರು, ಚುನಾವಣಾ ಪ್ರಚಾರ ಮತ್ತು ನಿರ್ವಹಣಾ ಸಮಿತಿ ಸದಸ್ಯರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸೇರಿ ಪ್ರಮುಖರು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.