News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: ಇಂದು ಭಾರೀ ಮಳೆಯಾಗುವ ಸಾಧ್ಯತೆ, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್

Bengaluru: A depression in the Bay of Bengal, rains lash Karnataka again
Photo Credit : Twitter

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಕೊಳ್ಳುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಶನಿವಾರ) ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.

ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು