News Karnataka Kannada
Friday, April 12 2024
Cricket
ಬೆಂಗಳೂರು ನಗರ

ಬಿಜೆಪಿಯುವರು ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ: ಸಿಎಂ ಸಿದ್ದರಾಮಯ್ಯ

BJP did not fight for country's independence: CM Siddaramaiah
Photo Credit : News Kannada

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು ಒಬ್ಬನೇ ಒಬ್ಬ ಬಿಜೆಪಿ ಪರಿವಾರದ ಸದಸ್ಯ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲು ಸೇರಿಲ್ಲ ಎಂದರು. ವಿಶ್ವ ಮಟ್ಟದಲ್ಲಿ ಭಾರತ ತಲೆ ಎತ್ತಿ ನಿಲ್ಲಲು ನೆಹರು ಭಾರತ ದೇಶಕ್ಕೆ ಹಾಕಿದ ಭದ್ರ ಬುನಾದಿ ಕಾರಣ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಅಷ್ಟೆ. ಇವರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವ ಕೀಳರಿಮೆ ಮತ್ತು ಅಳುಕಿನಿಂದ ಸ್ವಾತಂತ್ರ್ಯ ಹೋರಾಟಗಾರರಾಗಿ 9 ವರ್ಷ ಜೈಲು ವಾಸ ಅನುಭವಿಸಿ 17 ವರ್ಷ ದೇಶದ ಪ್ರಧಾನಿ ಆಗಿದ್ದ ನೆಹರೂ ಅವರನ್ನು ಆಡಿಕೊಳ್ಳುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಶಿಕ್ಷಣ ಸಂಸ್ಥೆಗಳು, ವಿಜ್ಞಾನ, ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟುಗಳು, ಆಸ್ಪತ್ರೆಗಳು ಸೇರಿ ಆಧುನಿಕ ಭಾರತದ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ಕ್ಷೇತ್ರಗಳನ್ನೂ ಆಗಿನ ಕಾಲಕ್ಕೇ ಸ್ಥಾಪಿಸಿದ್ದರು. 17 ವರ್ಷಗಳ ಕಾಲ ಪ್ರಧಾನಿ ಆಗಿದ್ದ ನೆಹರೂ ಅವರು ಚರ್ಚೆ, ಸಂವಾದದಲ್ಲಿ ನಂಬಿಕೆ ಇಟ್ಟುಕೊಂಡಿದ್ದರು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು