ಬೆಂಗಳೂರು: ಸಿದ್ದರಾಮಯ್ಯ ಅವರ ಸರ್ಕಾರ ಬದುಕಿದ್ದು ಡ್ರಗ್ಸ್ ದಂಧೆಯಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ನಿಯಂತ್ರಣ ಮಾಡಿದ್ದು ಬಿಜೆಪಿ ಸರ್ಕಾರ. ಯಡಿಯೂರಪ್ಪ ಸಿಎಂ ಆಗಿದ್ದಾಗ, ಬೊಮ್ಮಾಯಿ ಗೃಹ ಸಚಿವ ಆಗಿದ್ದಾಗ ಡ್ರಗ್ಸ್ ದಂಧೆಯ ವಿರುದ್ಧ ಮೇಲೆ ಕ್ರಮ ಕೈಗೊಂಡಿದ್ದರು. ಈಗ ಆರಗ ಜ್ಞಾನೇಂದ್ರ ರಾಜೀನಾಮೆ ಕೇಳ್ಲುತ್ತಿರುವ ಸಿದ್ದರಾಮಯ್ಯ ನವರು ಅಂದು ಅವರು ಮುಖ್ಯಮಂತ್ರಿಯಾದ ಮರುದಿನವೇ ರಾಜೀನಾಮೆ ನೀಡಬೇಕಿತ್ತು ಎಂದರು.
ಪಿಎಸ್ ಐ ನೇಮಕಾತಿ ಪ್ರಕರಣ ತನಿಖೆ ನಡೆಯುತ್ತಿದೆ. ಯಾವೆಲ್ಲಾ ಕಾಂಗ್ರೆಸ್ ನಾಯಕರು ಸಿಕ್ಕಿಹಾಕಿಕೊಳ್ಳುತ್ತಾರೆ ಗೊತ್ತಾಗಲಿದೆ. ಆ ಬಳಿಕ ಇದರ ಬಗ್ಗೆ ತೀರ್ಮಾನ ಎಂದರು.