ಬಿಜೆಪಿ ಸರ್ಕಾರದ ಅರಣ್ಯ ಅಕ್ರಮ ತನಿಖೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು(ಮೇ.30): ಹಿಂದಿನ ಸರ್ಕಾರ ಅರಣ್ಯ ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿರುವುದು ಪತ್ತೆಯಾದರೆ ಅದರ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಹೇಳಿರುವ ಅರಣ್ಯ ಇಲಾಖೆ ನೂತನ ಸಚಿವ ಈಶ್ವರ ಖಂಡ್ರೆ ಅವರು, ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ನಮ್ಮ ಇಲಾಖೆಯಲ್ಲಿ ಈ ಹಿಂದಿನ ಸರ್ಕಾರ ಯಾವುದೇ ಅಕ್ರಮ ನಡೆಸಿದ್ದರೂ ಅದರ ಬಗೆಗೂ ತನಿಖೆ ನಡೆಸುತ್ತೇವೆ. ಜನತೆ ಇಲಾಖೆಯಲ್ಲಿನ ಅಕ್ರಮದ ಬಗ್ಗೆ ಗಮನಕ್ಕೆ ತಂದರೆ ತಕ್ಷಣ ಕ್ರಮ ವಹಿಸಲಾಗುವುದು. ಅರಣ್ಯದಲ್ಲಿ ಅಕ್ರಮ ಗಣಿಗಾರಿಕೆ, ಮರಗಳ ನಾಶ ಸೇರಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಸಹಿಸುವುದಿಲ್ಲ. ಕಾನೂನು ಉಲ್ಲಂಘಿಸುವವರು ಯಾರೇ ಆದರೂ ಕ್ರಮ ವಹಿಸುತ್ತೇವೆ. ಇದು ನಾನು ನೀಡುತ್ತಿರುವ ಎಚ್ಚರಿಕೆ’ ಎಂದು ಅವರು ಹೇಳಿದರು.

‘ಹಿಂದಿನ ಸರ್ಕಾರ ಆನೆ ಸೆರೆ, ಸಂರಕ್ಷಣೆ ಕಾರ್ಯಾಚರಣೆಗೆ ಹೆಚ್ಚಿನ ಅನುದಾನ ನೀಡಿಲ್ಲ ಎಂದು ಆರೋಪ ಇದೆ. ಅದರ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯುತ್ತೇವೆ. ಜನರ ಜೀವ ಉಳಿಸಲು ಮಾನವ ಮತ್ತು ವನ್ಯ ಮೃಗಗಳ ಸಂಘರ್ಷ ತಪ್ಪಿಸಲು ಎಲ್ಲ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಮುಂದೆ ಅರಣ್ಯ ಅತಿಕ್ರಮಣ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ ಖಂಡ್ರೆ, ಅನೇಕ ಜನರು ಕಂದಾಯ ಭೂಮಿ ಎಂದು ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿದ್ದಾರೆ.

ಈ ಬಗ್ಗೆ ಸಾಕಷ್ಟುದೂರುಗಳಿವೆ. ಇವುಗಳನ್ನು ಗುರುತಿಸಿ ಡಿನೋಟಿಫೈ ಮಾಡಬೇಕಾಗುತ್ತದೆ. ಕಂದಾಯ ಮತ್ತು ಅರಣ್ಯ ಭೂಮಿಗಳ ಸಮಸ್ಯೆ ಇತ್ಯರ್ಥಕ್ಕೆ ಜಂಟಿ ಸರ್ವೇ ನಡೆಸುವ ಅಗತ್ಯವಿದೆ ಎಂದರು.

ಇನ್ನು, ‘ಈ ಖಾತೆ ಬಗ್ಗೆ ನನಗೆ ತೃಪ್ತಿಯಿದೆ. ಯಾವುದೇ ಖಾತೆಯಾದರೂ ನಾವು ದಕ್ಷತೆಯಿಂದ ನಿರ್ವಹಿಸಿದರೆ ಅದಕ್ಕೆ ಮೆರುಗು ಬರುತ್ತದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡುವೆ’ ಎಂದು ಅವರು ಹೇಳಿದರು.

Sneha Gowda

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

5 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

5 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

5 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

5 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

6 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

6 hours ago