ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಸೋಮವಾರ ಬಿಜೆಪಿ 180 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್ವೈ ಅನುಮೋದನೆ ನೀಡಿದ್ದಾರೆ.
ಆದರೆ, ಈಗ ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅದನ್ನು ಪರಿಷ್ಕರಿಸಲು ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧರಿಸಿದ್ದಾರೆ,
“ಯಡಿಯೂರಪ್ಪ ಅವರನ್ನು ಸಂಪೂರ್ಣವಾಗಿ ದೂರವಿಡಲಾಗಿದೆ. ಗುಜರಾತ್ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಲಾಗುವುದು. ಸುಮಾರು 30 ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗುವುದು” ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಮಾಜಿ ಸಿಎಂ ಬಿಎಸ್ವೈ ಅವರ ಅನುಪಸ್ಥಿತಿಯಲ್ಲಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.