ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಜಿಲ್ಲಾವಾರು ಅಭಿಪ್ರಾಯ: ಪರಿಶೀಲನೆ ಬಳಿಕ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು : ಬಿಜೆಪಿ ಈ ಸಲ ಟಿಕೆಟ್‌ ಹಂಚಿಕೆಗೆ ಮತದಾನದ ಪದ್ಧತಿ ಅಳವಡಿಸಿಕೊಂಡಿದೆ. ಜಿಲ್ಲಾವಾರು ಪದಾಧಿಕಾರಿಗಳು ಮತದಾನ ಮಾಡಲಿದ್ದು, ಬಳಿಕ ಎರಡು ದಿನ ಬೆಂಗಳೂರಿನಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಸುವ ಪ್ರಕ್ರಿಯೆ ನಡೆಯಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ. ಬಿಜೆಪಿಯಲ್ಲಿ ಪ್ರತಿ ಕ್ಷೇತ್ರಕ್ಕೆ ಅನೇಕ ಮಂದಿ ಅಕಾಂಕ್ಷಿಗಳು ಇರುವುದು ಮತ್ತು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎನ್ನುವ ಕಾರಣಕ್ಕೆ ಈ ಸಲ ಕರ್ನಾಟಕದಲ್ಲಿ ಕೇಸರಿ ಪಕ್ಷ ಮತದಾನ ಪದ್ಧತಿಯ ಮೊರೆ ಹೋಗಿದೆ. ಅದರೆ ಕಾಂಗ್ರೆಸ್‌ ಈ ಪದ್ಧತಿಯನ್ನು ಈಗಾಗಲೇ ಅಳವಡಿಸಿಕೊಂಡಿದೆ.
ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಜೆಡಿಎಸ್ ಕೂಡ 13 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಇದುವರೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

ಇಂದು (ಶುಕ್ರವಾರ) ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಜಿಲ್ಲಾವಾರು ಅಭಿಪ್ರಾಯ ಸಂಗ್ರಹ ನಡೆಯುತ್ತಿದೆ. ಏ.1 ಮತ್ತು 2ರಂದು ಬೆಂಗಳೂರಿನಲ್ಲಿ ಎಲ್ಲ ಜಿಲ್ಲೆಗಳ ಕೋರ್‌ ಕಮಿಟಿಗಳ ಸಭೆ ನಡೆಯಲಿದೆ. ನಂತರ ರಾಜ್ಯ ಕೋರ್‌ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದು ಏ. 4 ಅಥವಾ 5ರಂದು ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಯಾವ ಕಾರಣಕ್ಕೂ ಅಸಮಾಧಾನ ಭುಗಿಲೇಳಬಾರದು ಹಾಗೂ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಬಿಜೆಪಿ ಆಯ್ಕೆಗೆ ನಾಲ್ಕು ಹಂತದ ಪ್ರಕ್ರಿಯೆ ನಡೆಸಲಿದೆ. ಇದೆಲ್ಲ ಚುನಾವಣಾ ಚಾಣಕ್ಯ ಅಮಿತ್‌ ಶಾ ಕಣ್ಗಾವಲಿನಲ್ಲೇ ನಡೆಯುತ್ತಿದೆ.

Sneha Gowda

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

15 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

16 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

31 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

47 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

58 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago