News Karnataka Kannada
Friday, April 12 2024
Cricket
ಬೆಂಗಳೂರು ನಗರ

2024ರ ಚುನಾವಣೆಯಲ್ಲಿ ಬಿಜೆಪಿ ಮಣ್ಣು ಮುಕ್ಕಲಿದೆ: ಸಿಎಂ ಸಿದ್ದರಾಮಯ್ಯ

BJP will be wiped out in 2024 elections: Siddaramaiah
Photo Credit : News Kannada

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣ್ಣು ಮುಕ್ಕಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

2024 ರ ಲೋಕಸಭೆಗೆ ಬಿಜೆಪಿ ವಿರುದ್ಧ ಕಾರ್ಯತಂತ್ರ ರೂಪಿಸುವ ಮಹಾಘಟಬಂಧನ್‌ ಸಭೆಯಲ್ಲಿ ಭಾಗವಹಿಸಲು ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುವ ವೇಳೆ ಮಾತನಾಡಿದರು. ಬಿಜೆಪಿ ದೇಶದ ಆರ್ಥಿಕತೆಯನ್ನು ನಾಶ ಮಾಡಿದೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಹಣದುಬ್ಬರ ಗರಿಷ್ಠ ಮಟ್ಟದಲ್ಲಿದೆ. ರೈತರು, ದಲಿತರು, ಬಡವರು ಬದುಕಲು ಸಾಧ್ಯವಾಗುತ್ತಿಲ್ಲ. ಕೋಮುವಾದವು ಉತ್ತುಂಗದಲ್ಲಿದೆ. ಜನರು ಭಯದಿಂದ ಜೀವಿಸುವಂತಾಗಿದೆ ಎಂದರು.

ಪ್ರಧಾನಿ ಮೋದಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡುತ್ತಿವೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಕರ್ನಾಟಕದಲ್ಲಿ ನಾವು ಪ್ರಧಾನಿ ಮೋದಿಯನ್ನು ಸಮರ್ಥವಾಗಿ ಎದುರಿಸಲಿಲ್ಲವೇ? ಪ್ರಧಾನಿ ಮೋದಿ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಗೆದ್ದಿದೆ. ಅವರು 28 ಬಾರಿ ಇಲ್ಲಿಗೆ ಬಂದರೂ ನಾವು ಗೆದ್ದಿದ್ದೇವೆ. ಕರ್ನಾಟಕದಿಂದ ಬಿಜೆಪಿ ಪತನ ಆರಂಭವಾಗಿದೆ ಎಂದರು.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸಿ ಯುಪಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದರು. ಜೆಡಿಎಸ್ ಗೆ ಯಾವುದೇ ಸಿದ್ಧಾಂತವಿಲ್ಲ. ಅವರು ಈ ಹಿಂದೆ ಬಿಜೆಪಿ ಜತೆಗೂಡಿ ಸರ್ಕಾರ ರಚಿಸಿದ್ದು ಎಲ್ಲರಿಗೂ ತಿಳಿದಿದೆ ಎಂದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೂ ಬಿಜೆಪಿ ಜೊತೆ ಕೈ ಜೋಡಿಸಿದ ತಪ್ಪಿನ ಅರಿವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು