ಬೆಂಗಳೂರು ನಗರ

ಬಿಜೆಪಿ ನಿದ್ದೆಗೆಡಿಸಿ, ಕಾಂಗ್ರೆಸ್‌ ಗೆ ಖುಷಿ ಕೊಟ್ಟ ಸಮೀಕ್ಷೆ

ಬೆಂಗಳೂರು : ಮೂರೂ ಪಕ್ಷಗಳು 150ರ ಗುರಿ ಇಟ್ಟುಕೊಂಡು ಮತದಾರರ ಮನಗೆಲ್ಲಲು ಹಗಲಿರುಳು ಎನ್ನದೆ ಬೆವರು ಸುರಿಸುತ್ತಿವೆ. ಆದರೆ ಈ ನಡುವೆ ಮತದಾನೋತ್ತರ ಸಮೀಕ್ಷೆಗಳು ಮಾತ್ರ ಬೇರೆಯದ್ದೇ ಕಥೆ ಹೇಳುತ್ತಿವೆ. ಇದೀಗ ಲೋಕ್‌ಪೋಲ್‌ ಎಂಬ ಹೆಸರಿನಲ್ಲಿ ಸಂಸ್ಥೆಯೊಂದು ಮಾಡಿದ ಸಮೀಕ್ಷೆ ಜೆಡಿಎಸ್‌ ಮತ್ತು ಬಿಜೆಪಿಯ ನಿದ್ದೆಗೆಡಿಸಿದ್ದರೆ ಕಾಗ್ರೆಸ್‌ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಲೋಕ್‌ಪೋಲ್‌ ಸಮೀಕ್ಷೆ ಪ್ರಕಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ. ಕಾಂಗ್ರೆಸ್‌ 116 ರಿಂದ 122 ಸ್ಥಾನಗಳು ಪಡೆಯಬಹುದು ಎಂದು ಅಂದಾಜಿಸಲಾಗಿದ್ದು, ಈ ಸಮೀಕ್ಷೆಯನ್ನು ಆಧರಿಸಿಯೇ ಕಾಂಗ್ರೆಸ್ ಚುನಾವಣಾ ತಂತ್ರಗಾರಿಕೆಯನ್ನ ರೂಪಿಸುತ್ತಿದೆ.

ಆಡಳಿತರೂಢ ಬಿಜೆಪಿ 140ಕ್ಕೂ ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿದ್ದರೂ ಸಮೀಕ್ಷೆಯ ಪ್ರಕಾರ ಸಿಗುವುದು ಬರೀ 77 ರಿಂದ 83 ಸ್ಥಾನ. ಜೆಡಿಎಸ್‌ಗೆ 21 ರಿಂದ 27 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದೆ. 1 ರಿಂದ 4 ಪಕ್ಷೇತರರು ಗೆಲುವು ಸಾಧಿಸಬಹುದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಬಿಜೆಪಿಗೆ ಶೇ ಶೇ.33 ರಿಂದ 36ರಷ್ಟು ಮತಗಳು, ಕಾಂಗ್ರೆಸ್‌ಗೆ ಶೇ.39 ರಿಂದ 42 ಮತ ಸಿಗಬಹುದು. ಜೆಡಿಎಸ್‌ ಶೇ. 15 ರಿಂದ 18ರಷ್ಟು ಮತ ಪಡೆಯಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಬಿಜೆಪಿಗೆ ನಿರಾಸೆ ಉಂಟಾಗಲಿದೆ. ಲೋಕ್‌ಪೋಲ್‌ ಸಮೀಕ್ಷೆ ಪ್ರಕಾರ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ 10 ರಿಂದ 13 ಸ್ಥಾನ, ಕಾಂಗ್ರೆಸ್‌ಗೆ 21-24 ಹಾಗೂ ಜೆಡಿಎಸ್‌ಗೆ 14- 17 ಸ್ಥಾನಗಳು ಸಿಗಬಹುದು. ಕರಾವಳಿ ಭಾಗದಲ್ಲಿ ಬಿಜೆಪಿಗೆ 14 ರಿಂದ 17, ಕಾಂಗ್ರೆಸ್‌ಗೆ 7 ರಿಂದ 10 ಹಾಗೂ ಜೆಡಿಎಸ್‌ಗೆ 1 ಸ್ಥಾನ ದೊರಕಬಹುದು ಎನ್ನಲಾಗಿದೆ.

ಬಿಜೆಪಿಗೆ ಬೆಂಗಳೂರು ವ್ಯಾಪ್ತಿಯಲ್ಲೂ ಕಹಿ ಸುದ್ದಿ ಇದೆ. ಬೆಂಗಳೂರಿನಲ್ಲಿ ಬಿಜೆಪಿಗೆ 11 ರಿಂದ 14, ಕಾಂಗ್ರೆಸ್‌ಗೆ 19 ರಿಂದ 23 ಹಾಗೂ ಜೆಡಿಎಸ್‌ಗೆ 1ರಿಂದ 4 ಸ್ಥಾನಗಳು ಸಿಗಬಹುದು ಎಂದು ಸಮೀಕ್ಷೆ ಅಂದಾಜಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ 9ರಿಂದ 13, ಕಾಂಗ್ರೆಸ್‌ 24 ರಿಂದ 27 ಹಾಗೂ ಜೆಡಿಎಸ್‌ 2 ಸ್ಥಾನ ಗೆಲ್ಲಬಹುದು. ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ 27ರಿಂದ 30, ಕಾಂಗ್ರೆಸ್‌ 19 ರಿಂದ 22 ಹಾಗೂ ಜೆಡಿಎಸ್‌ಗೆ 1 ಸ್ಥಾನ ಗೆಲ್ಲಬಹುದು.

ಮಧ್ಯ ಕರ್ನಾಟಕದಲ್ಲಿ ಬಿಜೆಪಿಗೆ 10 ರಿಂದ 13, ಕಾಂಗ್ರೆಸ್‌ಗೆ 7ರಿಂದ 10 ಹಾಗೂ ಜೆಡಿಎಸ್‌ಗೆ 1 ಸ್ಥಾನ ಸಿಗಲಿದೆ ಎಂದು ಅಂದಾಜಿಸಲಾಗಿದೆ.

Sneha Gowda

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

13 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

29 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

57 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago