ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ (ಮಾ. 1)ರಂದು ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯ ಫೋಟೋ ಲಭ್ಯವಾಗಿದೆ.
ಶಂಕಿತ ಉಗ್ರ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ತಲೆ ಮೇಲೆ ವೈಟ್ ಹ್ಯಾಟ್ ಹಾಕಿಕೊಳ್ಳುವ ಮೂಲಕ ಮೊದಲೇ ಪ್ರೀ ಪ್ಲಾನ್ ಮಾಡಿಕೊಂಡು ಕೆಫೆಗೆ ಎಂಟ್ರಿ ಕೊಟ್ಟಿದ್ದಾನೆ. ಜೊತೆಗೆ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಗೆ ಬಂದಿದ್ದಾನೆ.
ಶಂಕಿತ ರವೆ ಇಡ್ಲಿ ತಿಂದು ಕೈ ವಾಶ್ ಮಾಡಿ ಬ್ಯಾಗ್ ಅಲ್ಲೇ ಇಟ್ಟು ಬೈಕ್ನಲ್ಲಿ ತೆರಳಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಈ ಬ್ಯಾಗ್ ಬ್ಲಾಸ್ಟ್ ಆಗಿದೆ.