ಕಾವೇರಿ ನದಿ ನೀರು ಹಂಚಿಕೆ: ರಾಜಕೀಯ ಮಾಡಲು ಬಯಸಲ್ಲ ಎಂದ ಡಿಸಿಎಂ

ಬೆಂಗಳೂರು: ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಜನತಾ ದಳ ಹಾಗೂ ಬಿಜೆಪಿ ಸರಕಾರಗಳು ತಮಿಳುನಾಡಿಗೆ ಎಷ್ಟು ನೀರು ಬಿಡುಗಡೆ ಮಾಡಿದ್ದವು ಎಂಬ ಅಂಕಿಅಂಶಗಳನ್ನು ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ, ಮಿತ್ರ ಪಕ್ಷ ಡಿಎಂಕೆ ಮೆಚ್ಚಿಸಲು ನೀರು ಬಿಡುಗಡೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ನಿಟ್ಟಿನಲ್ಲಿ ಸರ್ವಪಕ್ಷ ಸಭೆ ಕರೆಯಲು ಚಿಂತನೆ ನಡೆಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರ ಇದೆ ಎಂದು ಹೇಳುತ್ತಿದ್ದವರು ಮಹದಾಯಿ, ಕೃಷ್ಣಾ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿಲ್ಲ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕಾಂಗ್ರೆಸ್ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಹಿಂದೆ ಯಾವುದೇ ಸರಕಾರಗಳು ಈ ವಿಚಾರದಲ್ಲಿ ಸರ್ವಾಧಿಕಾರಿ ಧೋರಣೆ ತೋರಿಲ್ಲ. ಆದರೆ ಈಗಿನ ಸರಕಾರ ವಿರೋಧ ಪಕ್ಷವನ್ನಾಗಲಿ, ರೈತರನ್ನಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವಾಗಿಯೇ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದಲ್ಲದೆ, ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆ, ಕಾಂಗ್ರೆಸ್ ಮಿತ್ರ ಪಕ್ಷವಾಗಿದ್ದು, ಮೇಕೆದಾಟು ರ‍್ಯಾಲಿ ಆಯೋಜಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ಮನವರಿಕೆ ಮಾಡಿ ಮೇಕೆದಾಟು ಜಲಾಶಯ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

Gayathri SG

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

15 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

18 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

41 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago