News Karnataka Kannada
Monday, April 29 2024
ಬೆಂಗಳೂರು ನಗರ

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಪ್ರಧಾನಿ ಭೇಟಿ ಮಾಡಲಿರುವ ರಕ್ಷಣಾ ವೇದಿಕೆ ಸದಸ್ಯರು

Cauvery water sharing issue: Defence Forum members to meet PM Modi
Photo Credit : News Kannada

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ದೆಹಲಿ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿವೆ.

ಅಕ್ಟೋಬರ್ 18 ರಂದು ಜಂತರ್ ಮಂತರ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಬೆಂಗಳೂರಿನಿಂದ ದೆಹಲಿಗೆ ಕರವೇ ಕಾರ್ಯಕರ್ತರು ಮಂಗಳವಾರ ರಾಜ್ಯದಿಂದ ರೈಲು ಮತ್ತು ವಿಮಾನದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರೊಂದಿಗೆ ದೆಹಲಿ ಕನ್ನಡ ಸಂಘ ಸದಸ್ಯರು ಸೇರಿಕೊಳ್ಳಲಿದ್ದಾರೆ. ಕಾವೇರಿ ವಿವಾದ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಕಾರ್ಯಕರ್ತರು ಮನವಿ ಮಾಡಲು ಸಮಯ ಕೇಳಿದ್ದಾರೆ.

ಕರವೇ ನಾರಾಯಣ ಗೌಡ ಮತ್ತು ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್ ಅವರ ಮನವಿಗೆ ಪಿಎಂಒ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಕ್ಟೋಬರ್ 18 ರಂದು ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು