News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಸಿಬಿಎಸ್ಇ 12 ನೇ ತರಗತಿಯ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆ

CBSE Class 12 results to be released today
Photo Credit : Pexels

ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆ ಮಾಡಿದೆ.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೇಕಡಾವಾರು ಸಂಖ್ಯೆ 92.71 ರಷ್ಟಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್ ಮತ್ತು ಶಾಲೆಯ ಸಂಖ್ಯೆಯನ್ನು cbse.gov.in, results.cbse.nic.in ವೆಬ್‌ಸೈಟ್‌ನಲ್ಲಿ ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.

ಈ ಬಾರಿಯೂ ಸಹ ಹೆಣ್ಣುಮ್ಮಕ್ಕಳೇ ಮೇಲುಗೈ ಸಾಧಿಸಿದ್ದು, ಗಂಡುಮಕ್ಕಳಿಗಿಂತ 3.29% ರಷ್ಟು ಹೆಚ್ಚು ಫಲಿತಾಂಶ ದಾಖಲಾಗಿದೆ. ಶೇ. 94.54ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 91.25ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.

ಈ ವರ್ಷ 12ನೇ ತರಗತಿಯ ಅವಧಿ-2 ಪರೀಕ್ಷೆಗಳು ಏಪ್ರಿಲ್ 26 ರಿಂದ ಜೂನ್ 4 ರವರೆಗೆ ನಡೆದಿದೆ. ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಆಂತರಿಕ ಮೌಲ್ಯಮಾಪನ ಅಂಕಗಳು, ಪ್ರಾಜೆಕ್ಟ್ ಕೆಲಸಗಳು, ಪ್ರಾಯೋಗಿಕ ಪರೀಕ್ಷೆಗಳು ಮತ್ತು ಪೂರ್ವ-ಬೋರ್ಡ್ ಪರೀಕ್ಷೆಗಳ ವಿವರಗಳನ್ನು ಅಂಕಪಟ್ಟಿ ಒಳಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು