News Karnataka Kannada
Monday, May 06 2024
ಬೆಂಗಳೂರು ನಗರ

ಸಿಇಟಿ ಫಲಿತಾಂಶ ಇಂದು, ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ವಿವರ ನೋಡಿ

CET Result Today, How to Check Result See Details Here
Photo Credit :

ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ. ಬೆಳಗ್ಗೆ 9.30ಕ್ಕೆ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್‌ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಗ್ಗೆ 11 ಗಂಟೆ ನಂತರ http://kea.jar.nic.in ವೆಬ್‌ಸೈಟ್‌ನಲ್ಲಿ ಸಿಇಟಿ ಫಲಿತಾಂಶ ಲಭ್ಯವಾಗಲಿದೆ.
2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕಳೆದ ತಿಂಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆದಿತ್ತು. ಜೂನ್‌ 15ರಂದು ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವು ಜೂನ್ 15ರ ಗುರುವಾರ ಬೆಳಿಗ್ಗೆ 11ರ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ http://kea.kar.nic.inನಲ್ಲಿ ಲಭ್ಯವಾಗಲಿದೆ.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‍ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿಯನ್ನು ನಡೆಸಲಾಗುತ್ತದೆ. ಸಿಇಟಿ ಪರೀಕ್ಷೆ ಮೇ 20 ಹಾಗೂ 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಸುಮಾರು 16,000 ಕನ್ನಡೇತರ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಂಡಿದ್ದಾರೆ. ಮೇ 26 ರಂದು ಕೆಇಎ ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು